Home ಟಾಪ್ ಸುದ್ದಿಗಳು ಮೊದಲ ಕ್ಯಾಬಿನೇಟ್’ನಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ: ರಾಹುಲ್ ಗಾಂಧಿ

ಮೊದಲ ಕ್ಯಾಬಿನೇಟ್’ನಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ: ರಾಹುಲ್ ಗಾಂಧಿ

ಬೆಂಗಳೂರು: ಮೊದಲ ಕ್ಯಾಬಿನೇಟ್ ನಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಪ್ರಮಾಣ ವಚನ ಸ್ವೀಕಾರ ಸಂದರ್ಭ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನಕ್ಕೆ ಮೊದಲ ಸಂಪುಟ ಸಭೆಯಲ್ಲೇ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.


200 ಯುನಿಟ್ಗಳವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಉಚಿತವಾಗಿ ತಿಂಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ, ಮನೆಯ ಯಜಮಾನಿಗೆ ತಿಂಗಳಿಗೆ ₹ 2,000 ನೆರವು, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ ₹ 1,500 ನಿರುದ್ಯೋಗ ಭತ್ಯೆ ಮತ್ತು ಮಹಿಳೆಯರಿಗೆ ರಾಜ್ಯದಾದ್ಯಂತ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸುವುದಾಗಿ ಕಾಂಗ್ರೆಸ್ ಗ್ಯಾರಂಟಿ ನೀಡಿತ್ತು.

Join Whatsapp
Exit mobile version