ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶ ಕಾಂಗ್ರೆಸ್ ಗೆ ಇಲ್ಲ: ರಾಹುಲ್ ಗಾಂಧಿ

Prasthutha|

ಮಂಡ್ಯ: ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿಸಿ ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶ ಪಕ್ಷಕ್ಕಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ.
ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಶಿಕ್ಷಕರೊಂದಿಗೆ ನಡೆಸಿದ ಸಂವಾದದಲ್ಲಿ ರಾಹುಲ್ ಗಾಂಧಿ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

- Advertisement -

ಕನ್ನಡದ ಅಸ್ಮಿತೆಯ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಾಗಿದ್ದು, ಪ್ರತಿಯೊಬ್ಬರ ಮಾತೃಭಾಷೆ ಪ್ರಾಮುಖ್ಯ ಪಡೆದಿದೆ. ನಾವು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇವೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹಕ್ಕಿದೆ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸುದ್ದಿಗಾರರಿಗೆ ತಿಳಿಸಿದರು.

ಹಾಗಾಗಿ ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿ ಮಾಡುವ ಮತ್ತು ಕನ್ನಡದ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶವಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟವಾಗಿ ತಿಳಿಸಿರುವುದಾಗಿ ಕಾಂಗ್ರೆಸ್ ರಾಜ್ಯ ಮಾಧ್ಯಮ ವಿಭಾಗದ ಉಸ್ತುವಾರಿಯೂ ಆಗಿರುವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Join Whatsapp