ಕಾಂಗ್ರೆಸ್ ಗೆ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ: ಆರಗ ಜ್ಞಾನೇಂದ್ರ

Prasthutha|

ಚಿಕ್ಕಮಗಳೂರು : ಈ ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಆದರೆ ಕಾಂಗ್ರೆಸಿಗರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧವಾಗ್ದಾಳಿ ನಡೆಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಗಾಂಧಿ ಕುಟುಂಬಕ್ಕೊಂದು ಕಾನೂನು, ಜನರಿಗೊಂದು ಕಾನೂನಿಲ್ಲ. ಎಲ್ಲರಿಗೂ ಒಂದೇ ಕಾನೂನು. ಅದನ್ನು ಎಲ್ಲರೂ ಗೌರವಿಸಬೇಕು,ಪಾಲಿಸಬೇಕು.  ಇಡಿ ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡುವ ಕಾಂಗ್ರೆಸಿಗರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದು ಹೇಳಿದರು.

Join Whatsapp