ಎಂ.ಆರ್. ಸೀತಾರಾಮ್ ಅವರ ಸಭೆಗೂ ಕಾಂಗ್ರೆಸ್ ಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್

Prasthutha|

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಎಂ ಆರ್‌ ಸೀತಾರಾಂ  ನಡೆಸಿದ್ದ ನಡೆಸಿದ್ದ ಸಭೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಸೀತಾರಾಂ ಏನೋ ಸಭೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಕಾಂಗ್ರೆಸ್ ಗೂ ಅವರ ಸಭೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ತಮಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚಿಸಲು ಮಾಜಿ ಸಚಿವ ಎಂ.ಆರ್. ಸೀತಾರಾಂ ಬೆಂಗಳೂರಿನಲ್ಲಿಂದು ಬೆಂಬಲಿಗರ ಸಭೆ ನಡೆಸಿದ್ದರು. “ಕಾಂಗ್ರೆಸ್ ಒಳ್ಳೆಯ ಪಕ್ಷ. ಆದರೆ ಪಕ್ಷದ ಚುಕ್ಕಾಣಿ ಹಿಡಿದಿರುವವರು ಸರಿಯಿಲ್ಲ. 1984 ರಿಂದ ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತಿದ್ದು, ತಮಗೆ ಈ ವರೆಗೆ ನಾಲ್ಕು ಬಾರಿ ಅನ್ಯಾಯ ಮಾಡಲಾಗಿದೆ. ಹೀಗಾಗಿ ಇನ್ನೊಂದು ತಿಂಗಳಲ್ಲಿ ಇನ್ನೂ ಹಲವು ಹಿರಿಯ ಮುಖಂಡರು, ಬೆಂಬಲಿಗರ ಜೊತೆ ಸಭೆಗಳನ್ನು ನಡೆಸಿ ಆಷಾಢ ಮಾಡದ ನಂತರ ಮತ್ತೊಂದು ಬೃಹತ್ ಸಮಾವೇಶದ ಮೂಲಕ ರಾಜಕೀಯವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸೀತಾರಾಂ ಹೇಳಿದ್ದರು.

Join Whatsapp