ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ: ವಿಜಯೇಂದ್ರ

Prasthutha|

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಅಧಿಕಾರಕ್ಕೆ ಬಂದು ಎಂಟು ಒಂಬತ್ತು ತಿಂಗಳಾದರೂ ಅಭಿವೃದ್ಧಿ ಕಾಣಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

- Advertisement -


ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಜೆಟ್ ಅಧಿವೇಶನದಲ್ಲಿ ಭಾಷಣ ಮಾಡಿದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮರೆಮಾಚಲು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

- Advertisement -





Join Whatsapp