Home ಟಾಪ್ ಸುದ್ದಿಗಳು ಶೀಘ್ರವೇ ಹೈಕಮಾಂಡ್ ನಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿ.ಕೆ. ಶಿವಕುಮಾರ್

ಶೀಘ್ರವೇ ಹೈಕಮಾಂಡ್ ನಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿ.ಕೆ. ಶಿವಕುಮಾರ್

ನವದೆಹಲಿ: ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ’ ಎಂದು ತಿಳಿಸಿದರು.

Join Whatsapp
Exit mobile version