ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಇಬ್ಬರಿಗೂ ಶಿಸ್ತು ಮೀರಿ ಮಾತನಾಡದಂತೆ ದೂರವಾಣಿ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಸಂಸದ ರಾಘವೇಂದ್ರ ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪ ಅವರು ಕರೆ ನೀಡಿದ್ದರು. ಸಚಿವ ಕೆ.ಎನ್.ರಾಜಣ್ಣ ಅವರು, ನಾವು ಕಾಂಗ್ರೆಸ್ ಹೈಕಮಾಂಡ್ ಗುಲಾಮರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಕರೆ ಮಾಡಿರುವ ಕೆ.ಸಿ ವೇಣುಗೋಪಾಲ್ ಅವರು ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.