ಬೆಂಗಳೂರು: ಕಾಂಗ್ರೆಸ್ ಸೇರುವಂತೆ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಹ್ವಾನಿಸಿದ್ದಾರೆ. ಸ್ನೇಹಿತರು, ಆಪ್ತರ ಜೊತೆ ಚರ್ಚಿಸಿ ಇನ್ನೊಂದು ವಾರದಲ್ಲಿ ಈ ಬಗ್ಗೆ ತೀರ್ಮಾನಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಆಯೋಗದ ನಿಕಟಪೂರ್ವ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭೇಟಿ ಮಾಡುವಂತೆ ಅವರು ಕರೆದಿದ್ದರು. ಹೀಗಾಗಿ ಭೇಟಿ ಮಾಡಿ, ಕೆಲವು ವಿಚಾರಗಳನ್ನು ಚರ್ಚಿಸಿದ್ದೇನೆ ಎಂದರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹಿತೈಷಿಗಳು ಹೇಳಿದರೆ ಕಣಕ್ಕಿಳಿಯುತ್ತೇನೆ. ಬೇಡವೆಂದರೆ ದೂರ ಸರಿಯಲು ಹಿಂದೇಟು ಹಾಕುವುದಿಲ್ಲ’ ಎಂದ ಅವರು, ‘ಬಿಜೆಪಿಯ ಯಾವೊಬ್ಬ ನಾಯಕರೂ ನನ್ನನ್ನು ಇದುವರೆಗೆ ಸಂಪರ್ಕಿಸಿಲ್ಲ. ನಾನೂ ಅವರನ್ನು ಭೇಟಿ ಮಾಡಿಲ್ಲ’ ಎಂದರು.