ಮಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ 80 ಪರ್ಸೆಂಟ್ ಸರ್ಕಾರವಾಗಿದೆ. ಇದು ಕಳ್ಳರ, ಭ್ರಷ್ಟಚಾರಿಗಳ ಸರ್ಕಾರ ಎಂದು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಸಂವಿಧಾನದ ಹೆಸರಲ್ಲಿ ಮಾತನಾಡುವ ಸಿಎಂ ನೈತಿಕತೆಯಿಂದ ರಾಜೀನಾಮೆ ನೀಡಬೇಕು ಎಂದರು.
ತನಿಖೆಗೆ ಆದೇಶ ಆಗಿದೆ. ರಾಜ್ಯಪಾಲರ ಆದೇಶವನ್ನೇ ಪ್ರಶ್ನೆ ಮಾಡಿದ್ರೆ ಆತ್ಮವೇ ಇಲ್ಲ ಎನ್ನುವಂತೆ. ಇನ್ನು ಆತ್ಮಸಾಕ್ಷಿ ಎಲ್ಲಿಂದ ಬಂತು ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಮೊದಲಿಗೆ ರಾಜೀನಾಮೆ ಕೊಟ್ಟು ತನಿಖೆಗೆ ಆದೇಶ ಮಾಡಬೇಕಿತ್ತು. ಆಗ ಅವರ ಆದರ್ಶಗಳ ಮೇಲೆ ಇನ್ನಷ್ಟು ಗೌರವ ಹೆಚ್ಚಾಗುತ್ತಿತ್ತು ಎಂದು ಟಾಂಗ್ ಕೊಟ್ಟರು.