Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಮನೆಗೆ ಹೋಗಬೇಕೆಂದು ಕಾಂಗ್ರೆಸ್’ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಸಿದ್ದರಾಮಯ್ಯ ಮನೆಗೆ ಹೋಗಬೇಕೆಂದು ಕಾಂಗ್ರೆಸ್’ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಹೋಗಬೇಕೆಂದು ಕಾಂಗ್ರೆಸ್ ಪಕ್ಷದಲ್ಲೇ ಅನೇಕ ಜನ ಕಾಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.


ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ರಾಜಭವನ ಚಲೋ ಅಕ್ಷಮ್ಯ ಅಪರಾಧ. ಸೈಟ್ ತಗೊಂಡಿದ್ದು ತಪ್ಪಾಯ್ತು ಎಂದು ‘ಮುಡಾ ಚಲೋ’ ಮಾಡಿ. ಮುಡಾಕ್ಕೆ ಕೈಮುಗಿದು ಮುಡಾ ಚಲೋ ಮಾಡಿ ಎಂದರು.


ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ತನಿಖೆಗೆ ಯಾಕೆ ಹೆದರುತ್ತಿದ್ದೀರಿ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ನಮ್ಮ ಪ್ರಶ್ನೆಗೆ ಇನ್ನೂ ಉತ್ತರ ಕೊಟ್ಟಿಲ್ಲ. ಈಗ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ನವರ ಬೆದರಿಕೆಗೆ ಯಾರೂ ಬಗ್ಗಲ್ಲ ಎಂದರು.

Join Whatsapp
Exit mobile version