ತುಮಕೂರು: ಹಳೇ ಮೈಸೂರು ಪ್ರಾಂತ್ಯದ ಕಾಂಗ್ರೆಸ್, ಜೆಡಿಎಸ್ನ 10 ರಿಂದ 12 ಶಾಸಕರು ಶೀಘ್ರವೇ ಬಿಜೆಪಿಗೆ ಬರುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಭಾಗದಲ್ಲಿ ಹೆಚ್ಚಿನ ಶಾಸಕರು ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡುತ್ತಿದ್ದೇವೆ ಎಂದ ಅಶೋಕ್, ಮೊದಲ ಕಂತಿನಲ್ಲಿ ಕೆಲವಷ್ಟು ಮುಖಂಡರು ಬಂದಿದ್ದಾರೆ. ಇನ್ನೊಂದು ಕಂತಿನಲ್ಲಿ ಮತ್ತಷ್ಟು ಶಾಸಕರನ್ನು ಕರೆ ತರಲು ತಯಾರಿ ನಡೆಯುತ್ತಿದೆ ಎಂದರು. ರಾಜ್ಯಸಭಾ ಚುನಾವಣೆಯಲ್ಲಿ ಯಾರಾರಯರು ಯಾರಿಗೆ ಮತ ಹಾಕಿದ್ದಾರೆ ಅನ್ನೋದು ಗೊತ್ತು. ಇದು ಕೇವಲ ಟ್ರೈಲರ್ ಅಷ್ಟೇ, ಪಿಕ್ಚರ್ ಅಭಿ ಬಾಕಿ ಹೈ ಎಂದು ಹೇಳಿದ್ದಾರೆ.
ತುರುವೇಕೆರೆ ತಾಲೂಕು ಮಾಯಸಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಈಗ ಶಕ್ತಿಶಾಲಿ ಆಗುತ್ತಿದ್ದು, ಈ ಭಾಗದ ಬಹಳಷ್ಟು ಜನ ಬಿಜೆಪಿಗೆ ಬರುತ್ತಿದ್ದಾರೆ ಎಂದಿದ್ದಾರೆ.