ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ

Prasthutha|

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗುವುದನ್ನು ಖಚಿತಪಡಿಸಿದ್ದಾರೆ.

- Advertisement -

“ಇದು ನನಗೆ ಹೊಸ ಆರಂಭವಾಗಿದೆ ಮತ್ತು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ನನ್ನ ಕೊಡುಗೆಯನ್ನು ನೀಡಲು ಎದುರು ನೋಡುತ್ತಿರುವುದಾಗಿ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಒಂದು ಗಂಟೆ ಮುನ್ನಾ ಹೊಸ ರಾಜಕೀಯ ಪ್ರಯಾಣ ಆರಂಭಿಸುತ್ತಿರುವುದಾಗಿ ಸಿಂಗ್ ಟ್ವೀಟ್ ಮಾಡಿದ್ದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಆರ್ ಪಿಎನ್ ಸಿಂಗ್, ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಷ್ಟ್ರ, ಜನರು ಮತ್ತು ಪಕ್ಷಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

Join Whatsapp