ಕಾಂಗ್ರೆಸ್ ನಾಯಕ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Prasthutha|

ತುಮಕೂರು: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಜಯಚಂದ್ರ ಅವರು ಗಾಯಗೊಂಡಿದ್ದಾರೆ.

- Advertisement -

ಮಂಗಳವಾರ ರಾತ್ರಿ ಫಾರ್ಚುನರ್ ಕಾರಿನಲ್ಲಿ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದ ವೇಳೆ
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತುಮಕೂರು ತಾಲೂಕಿನ ಸಿಬಿ ಕ್ರಾಸ್​ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಪಲ್ಟಿಯಾಗಿದೆ.
ಈ ವೇಳೆ ಕಾರಿನಲ್ಲಿ ಜಯಚಂದ್ರ, ಕಾರು ಚಾಲಕ ಮತ್ತು ಗನ್ ಮ್ಯಾನ್ ಪ್ರಯಾಣಿಸುತ್ತಿದ್ದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಜಿ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp