ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆ

Prasthutha|

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಹಾಗೂ ಉತ್ತರ ಪ್ರದೇಶದಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಜಿತಿನ್ ಪ್ರಸಾದ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ದೆಹಲಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಸದಸ್ಯತ್ವವನ್ನು ಸ್ವೀಕರಿಸಿದ್ದಾರೆ.

- Advertisement -

ಜಿತಿನ್ ಪ್ರಸಾದ್ ಅವರ ಪಕ್ಷಾಂತರವು ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಪ್ರಸಾದ್ ಉತ್ತರ ಪ್ರದೇಶದಲ್ಲಿ ಪ್ರಸಿದ್ಧ ಬ್ರಾಹ್ಮಣ ಮುಖವಾಗಿರುವುದರಿಂದ ಇದು ಬಿಜೆಪಿಗೆ ದೊಡ್ಡ ವರದಾನವಾಗಿದೆ. ಮುಖ್ಯವಾಗಿ ಮಧ್ಯ ಯುಪಿಯ ಬ್ರಾಹ್ಮಣ ಸಮುದಾಯದ ಮೇಲೆ ಬಲವಾದ ಪ್ರಭಾವ ಬೀರಲು ಜಿತಿನ್ ಪ್ರಸಾದ್ ಗೆ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ಸೇರುತ್ತಿರುವುದು ಪಕ್ಷದ ನಡುವೆ ರಾಜಕೀಯ ಲಾಭದ ಲೆಕ್ಕಾಚಾರ ಶುರುವಾಗಿದೆ.

Join Whatsapp