ಬಂಟ್ವಾಳ | ಗೋಲ್ತಮಜಲು ಮಾಜಿ ಗ್ರಾ.ಪಂ. ಸದಸ್ಯ, ಕಾಂಗ್ರೆಸ್ ನಾಯಕ ಎಲಿಯಾಸ್ ಡಿ’ಸೋಜಾ ಬಿಜೆಪಿ ಸೇರ್ಪಡೆ

Prasthutha|

ಬಂಟ್ವಾಳ : ಗ್ರಾಮ ಪಂಚಾಯತ್ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಹೋಗುತ್ತಿರುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರ ಸಮ್ಮುಖದಲ್ಲಿ ಗೋಳ್ತಮಜಲುವಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಕಾಂಗ್ರೆಸ್ ನಾಯಕ ಎಲಿಯಾಸ್ ಡಿ’ಸೋಜಾರವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

- Advertisement -

ಬಿಜೆಪಿ ವತಿಯಿಂದ ಕಲ್ಲಡ್ಕದಲ್ಲಿ ನಡೆದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಡಿ’ಸೋಜಾ ಅವರು ತಮ್ಮ ಹಲವು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.  

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಯವರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಡಿ’ಸೋಜಾ ಮತ್ತು ಅವರ ಬೆಂಬಲಿಗರು ಬಿಜೆಪಿಗೆ ಸೇರ್ಪೆಡೆಗೊಂಡಿದ್ದಾರೆ ಎನ್ನಲಾಗಿದೆ.

- Advertisement -