ಮಮತಾ ಸರ್ಕಾರ ಇರುವವರೆಗೆ ತಲೆ ಕೂದಲು ಬೆಳೆಸಲ್ಲ ಎಂದಿದ್ದ ಕಾಂಗ್ರೆಸ್ ನಾಯಕ ಬಿಜೆಪಿಗೆ ಸೇರ್ಪಡೆ

Prasthutha|

ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಉರುಳುವವರೆಗೆ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ಕಾಂಗ್ರೆಸ್ ಪಕ್ಷಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಹೋರಾಡುವ ಮನಸ್ಸಿಲ್ಲ ಎಂದು ಆರೋಪಿಸಿರುವ ಅವರು, ಮಮತಾ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.


ಬುಧವಾರವಷ್ಟೇ ಕಾಂಗ್ರೆಸ್ ನಿಂದ ಹೊರಬಂದಿದ್ದ ಕೌಸ್ತವ್, ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಗೆ ವಿದಾಯ ಹೇಳುವ ವೇಳೆ ಅವರು ಪಕ್ಷದ ಸಂಘಟನೆಯಲ್ಲಿ ತಮಗೆ ‘ಸೂಕ್ತ ಗೌರವ ಸಿಗಲಿಲ್ಲ’ ಎಂದು ಆರೋಪಿಸಿದ್ದರು.

Join Whatsapp
Exit mobile version