ರಾಜಸ್ಥಾನ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಾಳವೀಯ ಬಿಜೆಪಿಗೆ ಸೇರ್ಪಡೆ

Prasthutha|

ಜೈಪುರ: ರಾಜಸ್ಥಾನದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ಇದರಿಂದಾಗಿ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.


ಮಹೇಂದ್ರಜೀತ್ ಸಿಂಗ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ ಸಿ.ಪಿ. ಜೋಶಿ, ‘ಪ್ರಧಾನಿ ಮೋದಿಯವರ ನಾಯಕತ್ವದಿಂದ ಪ್ರಭಾವಿತರಾಗಿರುವ ಬುಡಕಟ್ಟು ಜನಾಂಗದ ಪ್ರಮುಖ ನಾಯಕ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ’ ಎಂದು ಹೇಳಿದ್ದಾರೆ.



Join Whatsapp