ನ್ಯಾಯಾಲಯದ ಆವರಣದಲ್ಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Prasthutha|

ಹೊಸಪೇಟೆ : ಇಲ್ಲಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲೇ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ ಅವರನ್ನು ವ್ಯಕ್ತಿಯೊಬ್ಬ ಮಚ್ಚಿನಿಂದ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.

- Advertisement -

ಇಂದು ಹೊಸಪೇಟೆ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಆವರಣದಲ್ಲಿ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ವೆಂಕಟೇಶ್ ತಾರಿಹಳ್ಳಿಯವರು ಕುರ್ಚಿಯ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ಅಲ್ಲಿಗೆ ಆಗಮಿಸಿದ ವೆಂಕಟೇಶ್ ಅವರ ಸಂಬಂಧಿ ಮನೋಜ್ ಎಂಬಾತ, ವೆಂಕಟೇಶ್ ತಾರಿಹಳ್ಳಿಯ ಕುತ್ತಿಗೆಯ ಭಾಗಕ್ಕೆ ಏಕಾಏಕಿ ಮಚ್ಚಿನಿಂದ ಹೊಡೆದು ಹತ್ಯೆಗೈದಿದ್ದಾನೆ. ಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿ, ವೆಂಕಟೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.



Join Whatsapp