ಶಿಮ್ಲಾ: ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅವರು ಕೈಗೊಂಡ ಕ್ರಮಗಳು ನಿಜವಾಗಿಯೂ ಶ್ಲಾಘನೀಯ’ ಎಂದು ಹಿಮಾಚಲ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಿಕೊಂಡ ಅವರು, ಹಿಮಾಚಲ ಪ್ರದೇಶದಲ್ಲಿ ಶೇ 98ರಷ್ಟು ಹಿಂದೂಗಳು ಇದ್ದಾರೆ. ಎಲ್ಲರೂ ಶ್ರೀರಾಮನಲ್ಲಿ ನಂಬಿಕೆ ಹೊಂದಿದ್ದೇವೆ. ನಮ್ಮ ಧರ್ಮ ಪ್ರಗತಿ ಸಾಧಿಸುವುದನ್ನು ನೋಡಲು ಬಯಸುತ್ತೇವೆ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮಗೆ ಹಾಗೂ ತಮ್ಮ ಮಗ ವಿಕ್ರಮಾದಿತ್ಯ ಸಿಂಗ್ ಗೆ ಜಂಟಿ ಆಹ್ವಾನ ಬಂದಿದೆ. ಆದರೆ, ತೆರಳುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.