ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ

Prasthutha|

ಬೆಂಗಳೂರು: ಕಾಂಗ್ರೆಸ್‌‌ನ ಹಿರಿಯ ನಾಯಕ, ಮಾಜಿ ಸಚಿವ, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ ದೇಶಪಾಂಡೆ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶಸ್ತಿ ಘೋಷಣೆ ಮಾಡಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

- Advertisement -

ಪ್ರಶಸ್ತಿ ಪ್ರದಾನದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೇಶಪಾಂಡೆ ಅವರಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಗೌರವ ಬಂದಿದ್ದು, ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಉತ್ತಮ ‌ಕೆಲಸ ಮಾಡಿ ಜನಮನ ಗೆದ್ದಿದ್ದಾರೆ. ರಾಜ್ಯ ದೇಶದ ಹಿತಕ್ಕೆ ಸದಾ ಕಾಲ ಚಿಂತನೆ ಮಾಡುವವರು ಎಂದರು.



Join Whatsapp