ಪಂಚ ರಾಜ್ಯ ಫಲಿತಾಂಶದಿಂದ ಪಾಠ ಕಲಿತಿದ್ದೇವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Prasthutha|

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಫಲಿತಾಂಶದಲ್ಲಿ ನಾವು ಪಾಠ ಕಲಿತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಆ ಹಿನ್ನೆಲೆಯಲ್ಲಿ ಜನರ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ‘ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶದಲ್ಲಿ ಜಯಗಳಿಸಿದವರಿಗೆ ಶುಭಾಶಯಗಳು’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಶ್ರಮ ಹಾಗೂ ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು’ ಎಂದು ರಾಹುಲ್ ಬರೆದುಕೊಂಡಿದ್ದಾರೆ.



Join Whatsapp