ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Prasthutha|

ನವದೆಹಲಿ: ಆಗಸ್ಟ್ 20 ರಂದು ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಆಚರಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಲಡಾಖ್ ನ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ.

- Advertisement -


ರಾಹುಲ್ ಗಾಂಧಿಯವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಜಗತ್ತಿನ ಅತ್ಯಂತ ಸುಂದರ ಸ್ಥಳಗಳಲ್ಲೊಂದು ಎಂದು ನನ್ನ ತಂದೆ ಹೇಳುತ್ತಿದ್ದ ಪಂಗೊಂಗ್‌ ಲೇಕ್‌ನತ್ತ ನಾವು ಸಾಗುತ್ತಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.


ರಾಹುಲ್ ಗಾಂಧಿಯವರು KTM 390 ಅಡ್ವೆಂಚರ್ ನಲ್ಲಿ ಸವಾರಿ ಮಾಡುತ್ತಿದ್ದು, ಇತರ ಸವಾರರು ಅವರನ್ನು ಅನುಸರಿಸುತ್ತಿದ್ದಾರೆ. ಸಂಪೂರ್ಣ ಬೈಕಿಂಗ್ ಗೇರ್ ನಲ್ಲಿ ಹೆಲ್ಮೆಟ್, ಕೈಗವಸುಗಳು, ಸವಾರಿ ಬೂಟುಗಳು ಮತ್ತು ಜಾಕೆಟ್ ನೊಂದಿಗೆ ಲಡಾಖ್ ನ ಸುಂದರವಾದ ಪರ್ವತಗಳ ಮೂಲಕ ತಮ್ಮ ಸವಾರಿಯನ್ನು ಆನಂದಿಸುತ್ತಾರೆ.
ರಾಹುಲ್ ಗಾಂಧಿ ಪ್ರಸ್ತುತ ಲಡಾಖ್ ಪ್ರವಾಸದಲ್ಲಿದ್ದು, ಇದು ಆಗಸ್ಟ್ 25 ರವರೆಗೆ ಅಲ್ಲಿ ಸಮಯ ಕಳೆಯಲಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp