ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
10 ವರ್ಷಗಳ ಅವಧಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ತೀವ್ರ ರೀತಿಯ ಜ್ವರ ಮತ್ತು ನಿಶಕ್ತಿ ಸಮಸ್ಯೆಯಿಂದಾಗಿ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾದರು.