ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಸೊಸೆ ಬಿಜೆಪಿ ಸೇರ್ಪಡೆ

Prasthutha|

ಮುಂಬೈ: ಲೋಕಸಭಾ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಲೋಕಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಅವರ ಸೊಸೆ ಅರ್ಚನಾ ಪಾಟೀಲ್ ಚಾಕುರ್ಕರ್ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ಅರ್ಚನಾ ಪಾಟೀಲ್ ಉದಗೀರ್ ನಲ್ಲಿರುವ ಲೈಫ್ ಕೇರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿದ್ದು, ಅವರ ಪತಿ ಶೈಲೇಶ್ ಪಾಟೀಲ್ ಚಂದೂರಕರ್ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ನಾನು ಬಿಜೆಪಿಗೆ ಸೇರಿದ್ದೇನೆ. ಪ್ರಧಾನಿ ಮೋದಿ ತಂದ ನಾರಿ ಶಕ್ತಿ ವಂದನ್ ಅಧಿನಿಯಮದಿಂದ ನಾನು ಹೆಚ್ಚು ಪ್ರಭಾವಿತಳಾಗಿದ್ದೆ. ಇದು ಮಹಿಳೆಯರಿಗೆ ಸಮಾನ ಅವಕಾಶವನ್ನು ನೀಡುತ್ತದೆ ಎಂದು ಅರ್ಚನಾ ಪಾಟೀಲ್ ಇಂದು ಔಪಚಾರಿಕ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.



Join Whatsapp