ಕಾಂಗ್ರೆಸ್ ನಾಯಕ ಪಣಿಯೂರು ಎ.ಕೆ.ಸುಲೈಮಾನ್ (72) ಅವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಉಡುಪಿಯ ಉಚ್ಚಿಲ ಸಮೀಪದ ಪಣಿಯೂರು ನಿವಾಸಿಯಾಗಿದ್ದ ಎ.ಕೆ. ಸುಲೈಮಾನ್, ಉಡುಪಿ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾಗಿದ್ದರು. ಪ್ರಸಕ್ತ ಅವರು ಎರ್ಮಾಳ್ ಜುಮಾ ಮಸ್ಜಿದ್ ಅಧ್ಯಕ್ಷರಾಗಿ, ಅಲ್ ರಿಯಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತದೇಹವನ್ನು ಸಂಜೆಯ ವೇಳೆಗೆ ಪಣಿಯೂರಿನಲ್ಲಿರುವ ಅವರ ನಿವಾಸಕ್ಕೆ ತರಲಾಗುವುದೆಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.