Home ಕರಾವಳಿ ಕಾಂಗ್ರೆಸ್ ನಾಯಕ ಪಣಿಯೂರು ಎ.ಕೆ.ಸುಲೈಮಾನ್ ನಿಧನ

ಕಾಂಗ್ರೆಸ್ ನಾಯಕ ಪಣಿಯೂರು ಎ.ಕೆ.ಸುಲೈಮಾನ್ ನಿಧನ

ಕಾಂಗ್ರೆಸ್ ನಾಯಕ ಪಣಿಯೂರು ಎ.ಕೆ.ಸುಲೈಮಾನ್ (72) ಅವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಉಡುಪಿಯ ಉಚ್ಚಿಲ ಸಮೀಪದ ಪಣಿಯೂರು ನಿವಾಸಿಯಾಗಿದ್ದ ಎ.ಕೆ. ಸುಲೈಮಾನ್, ಉಡುಪಿ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾಗಿದ್ದರು. ಪ್ರಸಕ್ತ ಅವರು ಎರ್ಮಾಳ್ ಜುಮಾ ಮಸ್ಜಿದ್ ಅಧ್ಯಕ್ಷರಾಗಿ, ಅಲ್ ರಿಯಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತದೇಹವನ್ನು ಸಂಜೆಯ ವೇಳೆಗೆ ಪಣಿಯೂರಿನಲ್ಲಿರುವ ಅವರ ನಿವಾಸಕ್ಕೆ ತರಲಾಗುವುದೆಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Join Whatsapp
Exit mobile version