ಹೊಸದಿಲ್ಲಿ : 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಗೆಯನ್ನು ಪಕ್ಷ ಅಧಿಕಾರಕ್ಕೆ ಬಂದಾಗ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆ ಹಾಕಿದ್ದಾರೆ.
ತಮಿಳುನಾಡಿನ ದಿಂಡಿಗಲ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅನರ್ಹತೆಯನ್ನು ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಮುಖ್ಯಸ್ಥ ಮಣಿಕಂದನ್, “ಮಾರ್ಚ್ 23 ರಂದು ಸೂರತ್ ನ್ಯಾಯಾಲಯದ ನ್ಯಾಯಾಧೀಶರು ನಮ್ಮ ನಾಯಕನಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದರು. ನ್ಯಾಯಮೂರ್ತಿ ಎಚ್ ವರ್ಮಾ ಅವರೇ ನಮ್ಮ ಮಾತನ್ನೊಮ್ಮೆ ಕೇಳಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾವು ನಿಮ್ಮ ನಾಲಗೆಯನ್ನು ಕತ್ತರಿಸುತ್ತೇವೆ” ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಮಣಿಕಂದನ್ ವಿರುದ್ಧ ಮೂರು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ದಿಂಡಿಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.