ದಾವಣಗೆರೆ: ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಮ್ಜದ್ ಖಾನ್ (44), ಇಸ್ಮಾಯಿಲ್ ಖಾನ್ (42) ನೂರ್ ಅಹ್ಮದ್ (36) ಎಂದು ಗುರುತಿಸಲಾಗಿದೆ.
ಸೆ. 2 ರಂದು ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಅವರನ್ನು ಬಸವಾ ಪಟ್ಟಣದ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ, ಹೂತು ಹಾಕಲಾಗಿತ್ತು. ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ .ರಿಷ್ಯಂತ್ ಭೇಟಿ ನೀಡಿ ಪರಶೀಲನೆ ನಡೆಸಿದ್ದರು.