ಕಾಂಗ್ರೆಸ್ ನಾಯಕರು ಕಾವೇರಿ ಸಂಗಮದಲ್ಲಿ ನಾಡಿನ ಜನತೆಯ ಕ್ಷಮೆಯಾಚಿಸಲಿ : ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha: January 9, 2022

ಬೆಂಗಳೂರು: ಕಾವೇರಿ ನದಿ ನೀರಿನಲ್ಲಿ ನಮ್ಮ ಹಕ್ಕಿನ ಪಾಲು ಪಡೆಯಲು ವಿಫಲರಾದ ಕಾಂಗ್ರೆಸ್ ನಾಯಕರು ಸಂಗಮದ ದಂಡೆಯಲ್ಲಿ ಮಂಡಿಯೂರಿ ಜನತೆಯ ಕ್ಷಮೆ ಯಾಚಿಸಬೇಕು ಎಂದು ಹೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

ಕೋರೋನಾ ಸೋಂಕಿನ ವಾತಾವರಣದ ನಡುವೆಯೂ ಕಾನೂನನ್ನು ಲೆಕ್ಕಿಸದೆ ‘ ಪಾದಯಾತ್ರೆ’ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಅಲ್ಲಿನ ಜಿಲ್ಲಾಡಳಿತ ಕ್ರಮ ತೆಗೆದು ಕೊಳ್ಳುತ್ತದೆ ಹಾಗೂ ” ಕಾಂಗ್ರೆಸ್ ನಾಯಕರ ಈ ನಡವಳಿಕೆ ಅತ್ಯಂತ ಬೇಜವಾಬ್ದಾರಿ” ಅವರು ತಿಳಿಸಿದ್ದಾರೆ.

ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಯನ್ನು ಜಿಲ್ಲಾಡಳಿತ ನೋಡಿಕೊಳ್ಳುತ್ತಿದೆ ಎಂದ ಸಚಿವರು ” ಕಾಂಗ್ರೆಸ್ ನಾಯಕರು ನೀರಿನ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ. ಆದರೆ ಬುದ್ದಿವಂತರಾದ ಜನತೆ ಇವರ ನಾಟಕವನ್ನು ಅರ್ಥ ಮಾಡಿಕೊಂಡಿದ್ದಾರೆ” ಎಂದು ಹೇಳಿದರು.

ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದರು. ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೇಕೆದಾಟು ಯೋಜನೆಯನ್ನು ಅನುಷ್ಟಾನಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು, ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದ ಸಚಿವರು ವಿವಾದ ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಮುಂದಿದೆ ಎಂದು ನುಣುಚಿದರು.

ಕಾಂಗ್ರೆಸ್ ನಾಯಕರು ಅಧಿಕಾರ ದಲ್ಲಿದ್ದಾಗ ಐದು ವರ್ಷದಲ್ಲಿ ಕೇವಲ ಡಿ ಪಿ ಆರ್ ಸಲ್ಲಿಸಿದ್ದು ಬಿಟ್ಟರೆ,ಬೇರೆ ಏನೂ ಮಾಡಲಿಲ್ಲ ಎಂದು ಅವರು ಟೀಕಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!