ಮಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡರು ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದು, ಈ ವೇಳೆ ಹಲವು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.
ಕಾಂಗ್ರೆಸ್ ಮುಖಂಡ ಮಿಥುನ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ಇನಾಯತ್ ಅಲಿ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ.
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಇದೇ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಪ್ರಸಂಗ ನಡೆಯಿತು. ಮಹಾನಗರ ಪಾಲಿಕೆ ಎದುರು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಇಟ್ಟು ಪ್ರತಿಭಟನೆ ಮಾಡಲಾಯಿತು.