ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡನಾರ್ಹ.ಚಂದ್ರು ಕೊಲೆ ಸಂಬಂಧ ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡಿದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಆರಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.