Home ಟಾಪ್ ಸುದ್ದಿಗಳು ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ

ಬೆಂಗಳೂರು: ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿದರು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ವಿಧಾನಮಂಡಲ ಅಧಿವೇಶನಕ್ಕೆ ಸೈಕಲ್ ನಲ್ಲ ಆಗಮಿಸಿದರು.


ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಗೋವಿಂದರಾಜು ಮತ್ತಿತರರ ಮುಖಂಡರು ಭಾಗವಹಿಸಿದ್ದರು

Join Whatsapp
Exit mobile version