ಕಾಂಗ್ರೆಸ್ ನಾಯಕರು ಕರಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ: ಸುನೀಲ್ ಕುಮಾರ್

Prasthutha|

ಉಡುಪಿ: ರಾಮಮಂದಿರ ಉದ್ಘಾಟನೆಗೆ ಬಿಜೆಪಿ, ಕಾಂಗ್ರೆಸ್ ಎಲ್ಲ ರಾಜಕೀಯ ಪಕ್ಷದ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಇದೇ ಸಮಯದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಮಾಜಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ರಾಮಮಂದಿರ ಉದ್ಘಾಟನೆಗೆ ಬಂದು ಕಾಂಗ್ರೆಸ್ ನಾಯಕರು ಕರಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ ಎಂದಿದ್ದಾರೆ.

- Advertisement -

ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸಹಿತ ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನೆಗೆ ಬರುವ ಮಾನಸಿಕತೆ ಬೆಳೆಸಿಕೊಂಡರೆ ಒಳ್ಳೆಯದು. ಪ್ರಾಯಶ್ಚಿತಕ್ಕೆ ಅವಕಾಶ ಇದು. ಆಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು ಕರೆಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. ಚುನಾವಣೆ ಬಂದಾಗ ಮಾತ್ರ ಹಿಂದೂ ಎಂದು ಹೇಳಿಕೊಳ್ಳುವ ಬದಲು ನೈಜ ಹಿಂದುತ್ವ ಪ್ರದರ್ಶಿಸಲಿ ಎಂದು ಸುನಿಲ್ ಹೇಳಿದರು.

ಆರಂಭದಿಂದಲೂ ರಾಮಮಂದಿರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವುದು ಎಲ್ಲರಿಗೂ ಗೊತ್ತಿರುವಂತದ್ದೆ. ಹಿಂದೆ ರಾಮನ ಅಸ್ತಿತ್ವ ಪ್ರಶ್ನಿಸಿದ್ದರು. ಈಗ ನಿರ್ಮಾಣವಾಗಿರುವುದು ರಾಮಮಂದಿರ ಅಲ್ಲ, ರಾಷ್ಟ್ರಮಂದಿರ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

Join Whatsapp