ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ: ನಿಖಿಲ್‌ ಕುಮಾರಸ್ವಾಮಿ

Prasthutha|

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿತು ಎಂದ ಮಾತ್ರಕ್ಕೆ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದು ಅಕ್ಷಮ್ಯ ಅಪರಾಧ ಎಂದು ನಟ, ಜೆಡಿಎಸ್ ನಾಯಕ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಈ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದು, ರಾಜ್ಯದ ಹಿತಾಸಕ್ತಿ ಕಡೆಗಣಿಸುವ ಕೃತ್ಯವನ್ನು ಖಂಡಿಸುತ್ತೇನೆ. ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.

ಕಾಂಗ್ರೆಸ್‌ಗೆ ಕಾವೇರಿ ಎನ್ನುವುದು ಲಾಭದ ವಿಚಾರವಾಗಿಯೇ ಉಳಿದಿದೆ. ಸ್ವಾತಂತ್ರ್ಯ ನಂತರವೂ ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ ಎಂದು ಬರೆದು ಕೊಂಡಿದ್ದಾರೆ.



Join Whatsapp