ಇ.ಡಿ. ವಿರುದ್ಧ ಕಾಂಗ್ರೆಸ್ ನಾಯಕರ ಪ್ರದರ್ಶನ, ಗುಲಾಮಿತನದ ಅನಾವರಣ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆ ಇ.ಡಿ. ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆಯನ್ನು ಟೀಕಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, “ಕಾಂಗ್ರೆಸ್ ನಾಯಕರ ವರ್ತನೆ ಗುಲಾಮಿತನದ ಅನಾವರಣ” ಎಂದು ಕಿಡಿಕಾರಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಕಾಂಗ್ರೆಸ್ ನಾಯಕರ ವರ್ತನೆಯಿಂದ  ” ದೇಶದಲ್ಲಿ ಕಾಂಗ್ರೆಸ್  ನಾಯಕರಿಗೊಂದು ಕಾನೂನು,  ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು, ಸಂವಿಧಾನ ಇದೆಯೇ ಎಂದು ಜನತೆಯೇ ಪ್ರಶ್ನಿಸುತ್ತಿದ್ದಾರೆ” ಎಂದರು.

ಕಾಂಗ್ರೆಸನ ನಾಯಕರು ಹಾಗೂ ಅವರ ಹಿಂಬಾಲಕರು ಯಾಕೆ ಪ್ರತಿಭಟನೆ ಮಾಡಬೇಕು ಎಂದು ಪ್ರಶ್ನಿಸಿದ ಗೃಹ ಸಚಿವರು ” 130 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ  ಹಾಗೂ ಅದರ ನಾಯಕರುಗಳಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ?” ಎಂದು ಪ್ರಶ್ನಿಸಿದರು.

- Advertisement -

 ಕೋವಿಡ್ ವಿರುದ್ಧದ ಹೋರಾಟ ಇನ್ನೂ ನಡೆಯುತ್ತಿದೆ, ಬೆಂಗಳೂರಿನ ಎರಡು ಶಾಲೆಗಳಲ್ಲಿ ಕೊರೋನ ಸ್ಫೋಟಗೊಂಡಿದ್ದು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ, ಇಂಥ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಜನ ಸೇರಿಸುವುದು, ಅಪಾಯಕ್ಕೆ ಆಹ್ವಾನ ಕೊಟ್ಟಂತೆ” ಎಂದರು.



Join Whatsapp