ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಪ್ರದೀಪ್ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು

Prasthutha|

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ  ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

- Advertisement -

ಮೃತ ಉದ್ಯಮಿ ಪ್ರದೀಪ್ ಪತ್ನಿ ನಮಿತಾ ನೀಡಿದ ದೂರಿನನ್ವಯ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಅರವಿಂದ ಲಿಂಬಾವಳಿ ಸೇರಿದಂತೆ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್ ಎಂಬವರ ವಿರುದ್ಧ ಎಫ್’ಐಆರ್ ದಾಖಲಾಗಿದೆ.

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ 6 ಮಂದಿಯ ಹೆಸರನ್ನು ಡೆತ್ ನೋಟ್ ನಲ್ಲಿ ಪ್ರದೀಪ್ ಬರೆದಿದ್ದರು.

Join Whatsapp