ಕಾಂಗ್ರೆಸ್ ಶಾಸಕಾಂಗ ಸಭೆ ಅಂತ್ಯ : ರಾಜಭವನಕ್ಕೆ ಸಿದ್ದರಾಮಯ್ಯ

Prasthutha|

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

- Advertisement -

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ರಾತ್ರಿ 8 ಗಂಟೆಗೆ ಆರಂಭವಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಎಲ್ಲಾ ಕಾಂಗ್ರೆಸ್ ಶಾಸಕರು, ಕೆಪಿಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ ಎಐಸಿಸಿಯ ವೀಕ್ಷಕರು ಹಾಜರಿದ್ದರು. ಹೈಕಮಾಂಡ್ ಆಯ್ಕೆಯಂತೆ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದರು. ಡಿ.ಕೆ ಶಿವಕುಮಾರ್ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರ ಹೆಸರಿನ ಪ್ರಸ್ತಾವನೆಯ ನಿರ್ಣಯ  ಮಂಡಿಸಿದರು. ಇದನ್ನು ಶಾಸಕರೆಲ್ಲರೂ ಅನುಮೋದಿಸಿದರು.

ಇದಕ್ಕೂ ಮುನ್ನಾ ದೆಹಲಿಯಿಂದ ಬೆಂಗಳೂರಿಗೆ ವಾಪಸಾದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಕಚೇರಿಯ ಬಳಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.



Join Whatsapp