ಮಂಗಳೂರು: ಕೊರೋನಾಗೆ ಆಲ್ಕೋಹಾಲ್ ಔಷಧ ಎಂದಿದ್ದ ಕಾಂಗ್ರೆಸ್ ಸದಸ್ಯ ಅಮಾನತು

Prasthutha|

ಉಳ್ಳಾಲ: ಇಲ್ಲಿನ ನಗರಸಭೆ ಸದಸ್ಯರೋರ್ವರನ್ನು ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಮಾನತು ಮಾಡಿದೆ.

- Advertisement -

ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಗಟ್ಟಿ ಕಾಂಗ್ರೆಸ್ ಪಕ್ಷದವರಾಗಿದ್ದರೂ ‌ಹಲವು ಸಂದರ್ಭದಲ್ಲಿ ಪಕ್ಷಕ್ಕೆ ವಿರೋಧವಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ನಡೆದ ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಭೆಗೂ ಗೈರಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.  

ಅಮಾನತುಗೊಂಡ ನಗರಸಭೆ ಸದಸ್ಯ ರವಿಚಂದ್ರ ಗಟ್ಟಿ, ಕೊರೋನಾ ಏರಿಕೆಯಾಗಿದ್ದ ಕಾಲದಲ್ಲಿ   ‘ರಮ್ ಕುಡಿದು, ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೋನಾ ದೂರವಾಗುತ್ತದೆ’ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವ್ಯಾಪಕ ವೈರಲ್ ಆಗಿತ್ತು.

- Advertisement -

ಸದಾ ಕುಡಿದ ಅಮಲಿನಲ್ಲಿ ಇರುತ್ತಿದ್ದ ಅವರಿಗೆ ಕಾಂಗ್ರೆಸ್ ಪಕ್ಷ ಎಚ್ಚರಿಕೆ ನೀಡುತ್ತಾ ಬಂದರೂ ರವಿಚಂದ್ರ ಗಟ್ಟಿ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ.

ಇವೆಲ್ಲಾ ಕಾರಣಗಳಿಂದ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ‌ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.



Join Whatsapp