Home ಟಾಪ್ ಸುದ್ದಿಗಳು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ: ಕರ್ನಾಟಕದ ನಾಲ್ವರಿಗೆ ಸ್ಥಾನ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ: ಕರ್ನಾಟಕದ ನಾಲ್ವರಿಗೆ ಸ್ಥಾನ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿ 39 ಸದಸ್ಯರುಳ್ಳ ಪಟ್ಟಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆ ಮಾಡಿದ್ದಾರೆ.

ಸಮಿತಿಯಲ್ಲಿ ಕರ್ನಾಟಕದಿಂದ ಖರ್ಗೆ ಅಲ್ಲದೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೈನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಂಎಲ್​​ ಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಸ್ಥಾನ ನೀಡಲಾಗಿದೆ.

ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್​ ಅವರಿಗೆ CWC ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಖಾಯಂ ಆಹ್ವಾನಿತರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​ ಅವರನ್ನು ಆಯ್ಕೆ ಮಾಡಲಾಗಿದೆ.

ಹಾಗೆಯೇ ಕರ್ನಾಟಕದ ಮೂಲದವರಾದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್‌ ಅವರಿಗೂ ಸ್ಥಾನ ನೀಡಲಾಗಿದೆ.

Join Whatsapp
Exit mobile version