ಬಿಜೆಪಿಯೊಂದಿಗೆ ವಿಲೀನಗೊಂಡ ಕಾಂಗ್ರೆಸ್ !

Prasthutha|

ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಂಡಿದೆ.

- Advertisement -


ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷ -ಸಿಎಲ್ ಪಿ ವನ್ನು ಆಡಳಿತಾರೂಢ ಬಿಜೆಪಿಯಲ್ಲಿ ವಿಲೀನಗೊಳಿಸುವುದನ್ನು ಅಂಗೀಕರಿಸಿರುವುದಾಗಿ ಗೋವಾ ವಿಧಾನಸಭೆ ಸ್ಪೀಕರ್ ರಮೇಶ್ ತಾವಡ್ಕರ್ ಗುರುವಾರ ಹೇಳಿದ್ದಾರೆ. ಇದರೊಂದಿಗೆ ಗೋವಾದಲ್ಲಿ ಕಾಂಗ್ರೆಸ್ ಬಹುತೇಕ ತನ್ನ ಅಸ್ತಿತ್ವ ಕಳೆದುಕೊಂಡಂತಾಗಿದೆ. ವಿರೋಧ ಪಕ್ಷದ ಸ್ಥಾನವೂ ಇಲ್ಲದಂತಾಗಿದೆ.


ಗೋವಾದ 11 ಕಾಂಗ್ರೆಸ್ ಶಾಸಕರ ಪೈಕಿ ಎಂಟು ಮಂದಿ ಶಾಸಕಾಂಗ ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸುವ ನಿರ್ಣಯವನ್ನು ಬುಧವಾರ ಅಂಗೀಕರಿಸಿದ್ದಾರೆ.

Join Whatsapp