Home ಟಾಪ್ ಸುದ್ದಿಗಳು ತನ್ನ ಪಾಪಗಳನ್ನು ಕಡಿಮೆ ಮಾಡಿಕೊಳ್ಳುವ ಸುವರ್ಣಾವಕಾಶ ಕಾಂಗ್ರೆಸ್ ಕಳೆದುಕೊಂಡಿದೆ: ಅಸ್ಸಾಂ ಸಿಎಂ

ತನ್ನ ಪಾಪಗಳನ್ನು ಕಡಿಮೆ ಮಾಡಿಕೊಳ್ಳುವ ಸುವರ್ಣಾವಕಾಶ ಕಾಂಗ್ರೆಸ್ ಕಳೆದುಕೊಂಡಿದೆ: ಅಸ್ಸಾಂ ಸಿಎಂ

ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಕಾಂಗ್ರೆಸ್ ತನ್ನ ಪಾಪಗಳನ್ನು ಕಡಿಮೆ ಮಾಡಿಕೊಳ್ಳುವ ಸುವರ್ಣಾವಕಾಶವನ್ನು ಕಳೆದುಕೊಂಡಿದೆ, ಅವರು ಕಾಂಗ್ರೆಸ್ ಆಹ್ವಾನಕ್ಕೆ ಅರ್ಹರಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಾಂಗ್ರೆಸ್ ವಿರುದ್ಧ ಕಿಡಿಗಾರಿದ್ದಾರೆ‌.

ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಸ್ಪಷ್ಟವಾಗಿ ಮುಂದಿಡಲಾಗಿದೆ ಎಂದು ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸಿತ್ತು.

ಈಗಾಗಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ‌ ಕೂಡ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

Join Whatsapp
Exit mobile version