ಕಾಂಗ್ರೆಸ್ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ಕಾಂಗ್ರೆಸ್ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ರಾಮಮಂದಿರ ರಾಜಕೀಯ ಕಾರ್ಯಕ್ರಮವಲ್ಲ, ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದೆ. ಆದರೆ, ಇದರಲ್ಲಿ ಇಂಡಿಯಾ ಒಕ್ಕೂಟ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ. ಇದೇ ವೇಳೆ ಮಂತ್ರಾಕ್ಷತೆ ಕೊಡಲು ಅನ್ನಭಾಗ್ಯ ಅಕ್ಕಿ ಬಳಕೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರ ‘ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಇಲ್ಲ, ಕಾಂಗ್ರೆಸ್ ನವರು ಏನೇ ಹೇಳಿದರೂ ಪ್ರಧಾನಿ ಮೋದಿ ಪರವಾಗಿ ಆಗುತ್ತದೆ ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ.

Join Whatsapp