ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 22) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.