ಲಕ್ನೊ: ರಾಯ್ ಬರೇಲಿ ಕ್ಷೇತ್ರದ ಕಾಂಗ್ರೆಸ್ ನ ಶಾಸಕಿ ಅದಿತಿ ಸಿಂಗ್ ಬುಧವಾರ ಬಿಜೆಪಿ ಸೇರ್ಪಡೆಯಾದರು.
ಉತ್ತರಪ್ರದೇಶದ ಲಕ್ನೋದಲ್ಲಿ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ನೇತೃತ್ವದಲ್ಲಿ ಅದಿತಿ ಸಿಂಗ್ ಅವರು ಬಿಜೆಪಿ ಸೇರಿದ್ದಾರೆ.
ಈ ಬೆಳವಣಿಗೆಯು 2022ರ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಅದಿತಿ ತಂದೆ ದಿವಂಗತ ಅಖಿಲೇಶ್ ಸಿಂಗ್ 1993 ರಿಂದ 2007 ರವರೆಗೆ ಕಾಂಗ್ರೆಸ್ ಶಾಸಕರಾಗಿದ್ದರು. 2007 ರಲ್ಲಿ ಕಾಂಗ್ರೆಸ್ ಅವರನ್ನು ಉಚ್ಚಾಟಿಸಿದ ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ ಅದಿತಿ 2017ರಲ್ಲಿ ಕಾಂಗ್ರೆಸ್ ಟಿಕೆಟ್ ಮೂಲಕ ಅದೇ ಕ್ಷೇತ್ರದಲ್ಲಿ ಗೆದ್ದುಕೊಂಡಿದ್ದರು.