ಬೆಂಗಳೂರು: ಕೋಚಿಮುಲ್ ಉದ್ಯೋಗ ಹಗರಣ ಮತ್ತು ಸರ್ಕಾರಿ ಭೂಮಿ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೂರು ಶಾಸಕ ಕೆವೈ ನಂಜೇಗೌಡ ಅವರನ್ನು ಜಾರಿ ನಿರ್ದೇಶನಾಲಯ (ED) ವಿಚಾರಣೆ ನಡೆಸುತ್ತಿದೆ.
ನಂಜೇಗೌಡ ಅವರು ಶನಿವಾರ ಶಾಂತಿನಗರದ ಇ.ಡಿ ಕಚೇರಿಯಲ್ಲಿ ಎರಡನೇ ದಿನದ ವಿಚಾರಣೆಗೆ ಹಾಜರಾದರು. ಕೆವೈ ನಂಜೇಗೌಡ ಮಾಲೂರು ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದಾಗ 80 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ 150 ಕೋಟಿ ರೂ.ಗೆ ಅಕ್ರಮವಾಗಿ ಮಂಜೂರು ಮಾಡಿದ್ದು, ಕೋಲಾರದ ಪ್ರಾದೇಶಿಕ ಆಯುಕ್ತರು ಪರಿಶೀಲನೆಯ ನಂತರ ಭೂ ಮಂಜೂರಾತಿಯನ್ನು ರದ್ದುಗೊಳಿಸಿದ್ದರು.