ಕಾಂಗ್ರೆಸ್‍ಗೆ ಕೈ ಕೊಟ್ಟ ಅಸ್ಸಾಂ ಶಾಸಕ ಕುರ್ಮಿ ಬಿಜೆಪಿ ತೆಕ್ಕೆಗೆ

Prasthutha|

ಕಾಂಗ್ರೆಸ್ ತೊರೆಯುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಸ್ಸಾಂನ ಕಾಂಗ್ರೆಸ್ ಶಾಸಕ ರುಪ್‍ಜ್ಯೋತಿ ಕುರ್ಮಿ ಅವರು ಪಕ್ಷ ಬಿಡಲು ತೀರ್ಮಾನಿಸಿದ್ದಾರೆ. ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರ್ಮಿ ಅವರು ಆದಷ್ಟು ಶೀಘ್ರ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ.

- Advertisement -

ಚಹಾ ಉತ್ಪಾದಿಸುವ ಸಮುದಾಯದ ಮುಖಂಡರಾಗಿರುವ ಕುರ್ಮಿ ಅವರು ಇಂದು ಸಭಾಧ್ಯಕ್ಷ ಬಿಸ್ವಜಿತ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ರವಾನಿಸಿದ್ದು ಬರುವ ಸೋಮವಾರ ಬಿಜೆಪಿ ಸೇರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಮಧ್ಯೆ ಕುರ್ಮಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಘೋಷಿಸಿದೆ.

Join Whatsapp