ಮೋದಿಗೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

Prasthutha|

ಬೆಳಗಾವಿ: ಮಂಗಳವಾರ ಬೆಳಗಾವಿಯಲ್ಲಿ ಸಂಚಾರಿ ಪಶು ಚಿಕಿತ್ಸಾ ಘಟಕವನ್ನು ಲೋಕಾರ್ಪಣೆ ಮಾಡಿದ ಸಂದರ್ಭ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -


ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ನಿನ್ನೆ ಸಂಚಾರಿ ಪಶು ಚಿಕಿತ್ಸಾ ಘಟಕವನ್ನು ಲೋಕಾರ್ಪಣೆ ಮಾಡಿದರು. ಇದೇ ವೇಳೆ ಬೆಳಗಾವಿ ವಿಭಾಗಕ್ಕೆ 82 ಸಂಚಾರಿ ಪಶು ಚಿಕಿತ್ಸಾ ಘಟಕಗಳನ್ನು ಲೋಕಾರ್ಪಣೆ ಮಾಡಲಾಯಿತು.


ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಪ್ರಧಾನಿ ಮೋದಿಜೀ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಕಾರ್ಯಕ್ರಮದ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಂಡಿರುವುದಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

Join Whatsapp