Home ಟಾಪ್ ಸುದ್ದಿಗಳು ಕಾಂಗ್ರೆಸ್‌ MLA ಸತೀಶ್ ಸೈಲ್ ಬಂಧನ: ಶಾಸಕ ಸ್ಥಾನ ಅನರ್ಹ ಭೀತಿ!

ಕಾಂಗ್ರೆಸ್‌ MLA ಸತೀಶ್ ಸೈಲ್ ಬಂಧನ: ಶಾಸಕ ಸ್ಥಾನ ಅನರ್ಹ ಭೀತಿ!

ಬೆಂಗಳೂರು: ಬೇಲೆೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನವಾಗಿದೆ.

ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 2010ರಲ್ಲಿ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್‌ ಸತೀಶ್‌ ತಪ್ಪಿತಸ್ಥ ಅಂತ ತೀರ್ಪು ನೀಡಿದೆ.

ಆರು ಪ್ರಕರಣದಲ್ಲೂ ದೋಷಿಯಾಗಿರುವ ಆಡಳಿತರೂಢ ಕಾಂಗ್ರೆಸ್​ ಪಕ್ಷದ ಶಾಸಕ ಸತೀಶ್ ಸೈಲ್ ಈಗ ಜೈಲು ಸೇರಿದ್ದಾರೆ.

2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯಾದ್ರೆ ಶಾಸಕ ಸ್ಥಾನ ಅನರ್ಹ?

ಸದ್ಯ ಇವತ್ತು ಕೋರ್ಟ್‌ಗೆ ಹಾಜರಾಗಿದ್ದ ಆರೋಪಿಗಳನ್ನ ವಶಕ್ಕೆ ಪಡೆದು ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇಂದು ಕೋರ್ಟ್ ಶಿಕ್ಷೆ ಪ್ರಕರಟಿಸಲಿದ್ದು, ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಯಾದ್ರೆ ಜಾಮೀನು ಸಿಗುತ್ತೆ. ಇಲ್ಲವಾದ್ರೆ, ಸತೀಶ್‌ ಸೈಲ್‌ಗೆ ಜೈಲೇ ಗತಿ. ಜೊತೆಗೆ ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯಾದ್ರೆ, ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇಂದು ಮಧ್ಯಾಹ್ನ 12.30ಕ್ಕೆ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ.

Join Whatsapp
Exit mobile version