ಗುಂಡು ಹಾರಿಸಿಕೊಂಡು ಕಾಂಗ್ರೆಸ್​ ಶಾಸಕನ ಮಗ ಆತ್ಮಹತ್ಯೆ

Prasthutha|

ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್​ ಶಾಸಕನ ಮಗ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ.

- Advertisement -

ಕಾಂಗ್ರೆಸ್​ ಶಾಸಕ ಸಂಜಯ್​ ಯಾದವ್​ ಅವರ 16 ವರ್ಷದ ಮಗ ವೈಭವ್​​ ರಿವಾಲ್ವರ್​ ನಿಂದ ಶೂಟ್​ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಾರು 4 ಗಂಟೆಯ ವೇಳೆ ಈ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ವೈದ್ಯರು ಕೆಲವೇ ಕ್ಷಣಗಳಲ್ಲಿ ವೈಭವ್​ ಕೊನೆಯ ಕೊನೆಯುಸಿರೆಳೆದಿದ್ದಾನೆ ಎಂದು ಮಾಹಿತಿ ನೀಡಿದರು.

Join Whatsapp