ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಬಹುತೇಕ ಖಚಿತ

Prasthutha|

ಬೆಂಗಳೂರು : ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ. ಬೆಂಗಳೂರಿನ ಪದ್ಮನಾಭ ನಗರದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಇಬ್ರಾಹಿಂ, ಪಕ್ಷ ಸೇರ್ಪಡೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

- Advertisement -

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ಇಬ್ರಾಹಿಂ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದರು. ಈ ಮೊದಲು ಕಾಂಗ್ರೆಸ್ ಮುಸ್ಲಿಮರನ್ನು ಕಡೆಗಣಿಸಿದೆ ಎಂಬ ಆರೋಪವನ್ನು ಸಿಎಂ ಇಬ್ರಾಹಿಂ ಮಾಡಿದ್ದರು. ಅವರು ಜೆಡಿಎಸ್ ಸೇರುವ ಬಗ್ಗೆ ಊಹಾಪೋಹಗಳು ಹರಡಿದ್ದವು.

ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಸಿಎಂ ಇಬ್ರಾಹಿಂರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Join Whatsapp